ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್ಕೆಸಿಸಿಐ) 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಂ.ಜಿ. ಬಾಲಕೃಷ್ಣ ಅಧಿಕಾರ ವಹಿಸಿಕೊಂಡಿದ್ದಾರೆ.
ಬಾಲಕೃಷ್ಣ ಅವರು ಕಳೆದ 13 ವರ್ಷದಿಂದ ಮಹಾಸಂಸ್ಥೆಯ ಉಪಾಧ್ಯಕ್ಷ, ಹಿರಿಯ ಉಪಾಧ್ಯಕ್ಷ ಸೇರಿ ವಿವಿಧ ಹುದ್ದೆಗಳು ಹಾಗೂ ಸಮಿತಿಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದಾರೆ.
ಹಿರಿಯ ಉಪಾಧ್ಯಕ್ಷರಾಗಿ ಉಮಾ ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಟಿ. ಸಾಯಿರಾಂ ಪ್ರಸಾದ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.