ನವದೆಹಲಿ: 2022-23ರ ಕೇಂದ್ರ ಬಜೆಟ್‌ನಲ್ಲಿ ಮಂಗಳವಾರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ₹ 5020.50 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ, ಇದು ಹಿಂದಿನ ಆರ್ಥಿಕ ವರ್ಷಕ್ಕಿಂತ ₹ 674.05 ಕೋಟಿ ಹೆಚ್ಚಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿಗೆ ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ₹ 5020.50 ಕೋಟಿ ಮೀಸಲಿಡಲಾಗಿದೆ.
2021-22ನೇ ಹಣಕಾಸು ವರ್ಷದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಬಜೆಟ್ ಅಂದಾಜು ₹4810.77 ಕೋಟಿಗಳಾಗಿದ್ದು, ನಂತರ ಪರಿಷ್ಕೃತ ಬಜೆಟ್ ₹ 4346.45 ಕೋಟಿ ಆಗಿದೆ.
ಸಚಿವಾಲಯಕ್ಕೆ ಪ್ರಸ್ತಾವಿತ ಹಂಚಿಕೆಯಲ್ಲಿ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ₹ 1425 ಕೋಟಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ₹ 515 ಕೋಟಿ ಮೀಸಲಿಡಲಾಗಿದೆ. ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಉಪಕ್ರಮಗಳಿಗೆ ₹ 491 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು 2022-23 ರ ಬಜೆಟ್ ಅನ್ನು ಶ್ಲಾಘಿಸಿದ್ದಾರೆ. ಇದು ಕೋವಿಡ್ ಸಾಂಕ್ರಾಮಿಕದ ಮಧ್ಯೆ ಸ್ವಾವಲಂಬಿ ಭಾರತಕ್ಕೆ ಅವಕಾಶ ನೀಡುತ್ತದೆ ಎಂದು ಹೇಳಿದರು.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.