ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಸರಣಿಯ ನಾಣ್ಯಗಳನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. ಅಂಧರೂ ಸುಲಭವಾಗಿ ಗುರುತಿಸಬಹುದಾದ ರೀತಿಯಲ್ಲಿ ಈ ನಾಣ್ಯಗಳನ್ನು ವಿನ್ಯಾಸಗೊಳಿಸಲಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ (ಆಜಾದಿ ಕಾ ಅಮೃತ್ ಮಹೋತ್ಸವ‌್) ಅಂಗವಾಗಿ ₹ 1, 2, 5, 10 ಮತ್ತು 20ರ ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಇವು ಚಲಾವಣೆಗೆ ಬರಲಿವೆ.
ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ‘ಹೊಸ ಸರಣಿಯ ನಾಣ್ಯಗಳು ಅಮೃತ ಕಾಲದ ಗುರಿಯನ್ನು ನೆನಪಿಸುತ್ತವೆ. ದೇಶದ ಅಭಿವೃದ್ಧಿಗೆ ಶ್ರಮಿಸಲು ಜನರನ್ನು ಪ್ರೇರೇಪಿಸುತ್ತವೆ’ ಎಂದು ಹೇಳಿದ್ದಾರೆ.
ಹೊಸ ನಾಣ್ಯಗಳನ್ನು ಆಯ್ದ ಶಾಖೆಗಳ ಮೂಲಕ ವಿತರಿಸಲಾಗುವುದು ಎಂದು ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.