ನವದೆಹಲಿ: 2024ರಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನವು (ಜಿಡಿಪಿ) ಶೇ 7.2ರಷ್ಟು ಪ್ರಗತಿ ಕಾಣಲಿದೆ ಎಂದು ಮೂಡಿಸ್ ರೇಟಿಂಗ್ಸ್ ಸಂಸ್ಥೆ ಅಂದಾಜಿಸಿದೆ.
ಆದರೆ, ಅಕ್ಟೋಬರ್‌ನಲ್ಲಿ ಚಿಲ್ಲರೆ ಹಣದುಬ್ಬರವು ಏರಿಕೆಯಾಗಿದೆ. ಹಾಗಾಗಿ, ಈ ವರ್ಷದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದೆ.
ಭಾರತದ ಆರ್ಥಿಕತೆ ಬೆಳವಣಿಗೆಯು ಸದೃಢವಾಗಿದೆ. ಹಣದುಬ್ಬರವು ಇಳಿಕೆಯ ಹಾದಿಯಲ್ಲಿದೆ. 2025ರಲ್ಲಿ ದೇಶದ ಜಿಡಿಪಿಯು ಶೇ 6.6ರಷ್ಟು ಮತ್ತು 2026ರಲ್ಲಿ ಶೇ 6.5ರಷ್ಟು ಪ್ರಗತಿ ಕಾಣಲಿದೆ ಎಂದು ಶುಕ್ರವಾರ ಬಿಡುಗಡೆಯಾಗಿರುವ ಜಾಗತಿಕ ಆರ್ಥಿಕ ಮುನ್ನೋಟದ ವರದಿ ವಿವರಿಸಿದೆ.
ಹಿಂಗಾರು ಅವಧಿಯಲ್ಲಿ ಬಿತ್ತನೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಏರಿಕೆಯಾಗಲಿದ್ದು, ಮುಂಬರುವ ತಿಂಗಳುಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಇಳಿಕೆಯಾಗಲಿದೆ. ಆಗ ಚಿಲ್ಲರೆ ಹಣದುಬ್ಬರ ದರವು ಆರ್‌ಬಿಐನ ನಿಗದಿತ ಗುರಿಗಿಂತಲೂ ಕಡಿಮೆ ದಾಖಲಾಗಲಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.