ADVERTISEMENT

ಜಿಡಿಪಿ ಬೆಳವಣಿಗೆ ಶೇ 6.7ರಷ್ಟು: ಮೂಡಿಸ್‌ ನಿರೀಕ್ಷೆ

ಪಿಟಿಐ
Published 1 ಸೆಪ್ಟೆಂಬರ್ 2023, 13:58 IST
Last Updated 1 ಸೆಪ್ಟೆಂಬರ್ 2023, 13:58 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಮೂಡಿಸ್‌ ಇನ್‌ವೆಸ್ಟರ್ಸ್‌ ಸರ್ವಿಸಸ್‌ ಕಂಪನಿಯು ಭಾರತದ ಜಿಡಿಪಿ ಬೆಳವಣಿಗೆ ಮುನ್ನೋಟವನ್ನು ಪರಿಷ್ಕರಿಸಿದೆ. 2023ನೇ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿಯು ಶೇ 6.7ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿದೆ.

ಈ ಮೊದಲು ಜಿಡಿಪಿಯು ಶೇ 5.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು. ಸೇವೆಗಳು ಉತ್ತಮ ಬೆಳವಣಿಗೆ ಕಂಡಿರುವುದು ಹಾಗೂ ಬಂಡವಾಳ ವೆಚ್ಚ ಹೆಚ್ಚಾಗಿರುವ ಕಾರಣಗಳಿಂದಾಗಿ ಏಪ್ರಿಲ್‌–ಜೂನ್‌ ಅವಧಿಯಲ್ಲಿ ಜಿಡಿಪಿಯು ಶೇ 7.8ರಷ್ಟು ಬೆಳವಣಿಗೆ ಕಂಡಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಜಿಡಿಪಿ ಮುನ್ನೋಟವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಅದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT