ನವದೆಹಲಿ: 2024–25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ 8 ಕೋಟಿಗೂ ಹೆಚ್ಚು ರಿಟರ್ನ್ಸ್ ಸಲ್ಲಿಕೆಯಾಗಿವೆ. ಈ ಪೈಕಿ 5.92 ಕೋಟಿ (ಶೇ 74ರಷ್ಟು) ತೆರಿಗೆದಾರರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಈ ವರ್ಷದಲ್ಲಿ 75 ಲಕ್ಷ ಪರಿಷ್ಕೃತ ಐಟಿಆರ್‌ಗಳು ಸಲ್ಲಿಕೆಯಾಗಿದ್ದು, ಹೆಚ್ಚುವರಿಯಾಗಿ ₹8 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ ಎಂದು ಹೇಳಿದೆ.
ಐದು ಪಟ್ಟು ಏರಿಕೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷದ ಅವಧಿಯಲ್ಲಿ ವೈಯಕ್ತಿಕವಾಗಿ ₹50 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿದವರು ಐಟಿಆರ್ ಸಲ್ಲಿಸುವ ಪ್ರಮಾಣದಲ್ಲಿ ಐದು ಪಟ್ಟು ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.
2013–14ರಲ್ಲಿ ₹50 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿದ 1.85 ಲಕ್ಷ ತೆರಿಗೆದಾರರು ರಿಟರ್ನ್ಸ್ ಸಲ್ಲಿಸಿದ್ದರು. 2023–24ರಲ್ಲಿ ಈ ತೆರಿಗೆದಾರರ ಸಂಖ್ಯೆ 9.39 ಲಕ್ಷಕ್ಕೆ ಮುಟ್ಟಿದೆ ಎಂದು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.