ADVERTISEMENT

ಎನ್‌ಸಿಎಲ್‌ಎಟಿ: ಹಂಗಾಮಿ ಅಧ್ಯಕ್ಷರ ನೇಮಕ

ಪಿಟಿಐ
Published 13 ಸೆಪ್ಟೆಂಬರ್ 2021, 14:12 IST
Last Updated 13 ಸೆಪ್ಟೆಂಬರ್ 2021, 14:12 IST

ನವದೆಹಲಿ: ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ಹಂಗಾಮಿ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಎಂ. ವೇಣುಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ. ನ್ಯಾಯಮಂಡಳಿಗೆ ಪೂರ್ಣಾವಧಿ ಅಧ್ಯಕ್ಷರು ಇಲ್ಲದೆ ಒಂದೂವರೆ ವರ್ಷ ಸಂದಿದೆ.

ಎನ್‌ಸಿಎಲ್‌ಎಟಿಗೆ ಹಂಗಾಮಿ ಅಧ್ಯಕ್ಷರನ್ನು ನೇಮಕ ಮಾಡಿರುವುದು ಇದು ಸತತ ಮೂರನೆಯ ಬಾರಿ. 2020ರ ಮಾರ್ಚ್‌ 14ರಂದು ನ್ಯಾಯಮೂರ್ತಿ ಎಸ್.ಜೆ. ಮುಖೋಪಾಧ್ಯಾಯ ಅವರು ಅಧ್ಯಕ್ಷ ಸ್ಥಾನದಿಂದ ನಿವೃತ್ತ ಆದ ನಂತರದಲ್ಲಿ ನ್ಯಾಯಮಂಡಳಿಯು ಪೂರ್ಣಾವಧಿ ಅಧ್ಯಕ್ಷರನ್ನು ಕಂಡಿಲ್ಲ.

ಅರೆ ನ್ಯಾಯಾಂಗದ ಅಧಿಕಾರ ಹೊಂದಿರುವ ನ್ಯಾಯಮಂಡಳಿಗಳಿಗೆ ಅಧಿಕಾರಿಗಳನ್ನು ನೇಮಕ ಮಾಡದೆ ಇರುವ ಮೂಲಕ ಕೇಂದ್ರವು, ನ್ಯಾಯಮಂಡಳಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಕಳೆದ ವಾರ ಕಳವಳ ವ್ಯಕ್ತಪಡಿಸಿತ್ತು.

ADVERTISEMENT

ನ್ಯಾಯಮೂರ್ತಿ ವೇಣುಗೋಪಾಲ್ ಅವರನ್ನು ಸೆಪ್ಟೆಂಬರ್ 11ರಿಂದ ಜಾರಿಗೆ ಬರುವಂತೆ ನ್ಯಾಯಮಂಡಳಿಯ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅವರು ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.