ನವದೆಹಲಿ: ನೇರ ತೆರಿಗೆಯ ನಿವ್ವಳ ಸಂಗ್ರಹವು 2023–24ರ ಹಣಕಾಸು ವರ್ಷದ ಜನವರಿ 11ರ ವರೆಗೆ ₹14.70 ಲಕ್ಷ ಕೋಟಿಯಷ್ಟು ಆಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 19ರಷ್ಟು ಏರಿಕೆಯಾಗಿದೆ.
2023ರ ಏಪ್ರಿಲ್ 1ರಿಂದ 2024ರ ಜನವರಿ 10ರ ವರೆಗೆ ₹2.48 ಲಕ್ಷ ಕೋಟಿ ಮೊತ್ತದ ಮರುಪಾವತಿ ಮಾಡಲಾಗಿದೆ. ಕಂಪನಿಗಳ ವರಮಾನ ತೆರಿಗೆ (ಸಿಐಟಿ) ಮತ್ತು ವೈಯಕ್ತಿಕ ಆದಾಯ ತೆರಿಗೆಯ (ಪಿಐಟಿ) ಬೆಳವಣಿಗೆ ದರವು ಕ್ರಮವಾಗಿ ಶೇ 8.32 ಮತ್ತು ಶೇ 26.11ರಷ್ಟು ದಾಖಲಾಗಿದೆ ಎಂದು ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.