ADVERTISEMENT

ನೇರ ತೆರಿಗೆ ಸಂಗ್ರಹ ಶೇ 21ರಷ್ಟು ಹೆಚ್ಚಳ

ಡಿ. 17ರವರೆಗೆ ₹13.70 ಲಕ್ಷ ಕೋಟಿ ಸಂಗ್ರಹ

ಪಿಟಿಐ
Published 18 ಡಿಸೆಂಬರ್ 2023, 16:03 IST
Last Updated 18 ಡಿಸೆಂಬರ್ 2023, 16:03 IST
   

ನವದೆಹಲಿ: ದೇಶದಲ್ಲಿ 2023–24ನೇ ಆರ್ಥಿಕ ಸಾಲಿನಡಿ ನೇರ ತೆರಿಗೆಯ ನಿವ್ವಳ ಸಂಗ್ರಹವು ಒಟ್ಟು 13.70 ಲಕ್ಷ ಕೋಟಿಯಷ್ಟಾಗಿದೆ ಎಂದು ಕೇಂದ್ರ ಆದಾಯ ತೆರಿಗೆ ಇಲಾಖೆಯು ಸೋಮವಾರ ತಿಳಿಸಿದೆ.

ಕಳೆದ ಸಾಲಿಗೆ ಹೋಲಿಸಿದರೆ ಶೇ 21ರಷ್ಟು ತೆರಿಗೆ ಸಂಗ್ರಹ ಹಿಗ್ಗಿದೆ. ಕಂಪನಿಗಳ ವರಮಾನ ತೆರಿಗೆ (ಸಿಐಟಿ) ಹಾಗೂ ವೈಯಕ್ತಿಕ ಆದಾಯ ತೆರಿಗೆ (ಪಿಐಟಿ) ಮೂಲಕ ಈ ವರ್ಷ ₹18.23 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ಪೈಕಿ ಶೇ 75ರಷ್ಟು ಸಂಗ್ರಹವಾಗಿದೆ ಎಂದು ಹೇಳಿದೆ. 

ಒಟ್ಟು 13,70,388 ಕೋಟಿ (ಡಿಸೆಂಬರ್‌ 17ರ ವರೆಗೆ) ತೆರಿಗೆ ಸಂಗ್ರಹಿಸಲಾಗಿದೆ. ಈ ಪೈಕಿ ಕಂಪನಿಗಳ ವರಮಾನ ತೆರಿಗೆ ಮೊತ್ತ ₹6.95 ಕೋಟಿ ಆಗಿದೆ. ವೈಯಕ್ತಿಕ ಆದಾಯ ತೆರಿಗೆ ಹಾಗೂ ಹೊಸ ಷೇರುಗಳ ವಹಿವಾಟಿನ ಮೇಲಿನ ತೆರಿಗೆಯಿಂದ ₹6.73 ಲಕ್ಷ ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದೆ.

ADVERTISEMENT

ಅಲ್ಲದೇ, ಡಿಸೆಂಬರ್‌ 17ರ ವರೆಗೆ ತೆರಿಗೆದಾರರಿಗೆ ₹2.25 ಲಕ್ಷ ಕೋಟಿ ಮರುಪಾವತಿ (ರೀಫಂಡ್‌) ಮಾಡಲಾಗಿದೆ ಎಂದು ತಿಳಿಸಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ₹11,35,554 ಕೋಟಿ ತೆರಿಗೆ ಸಂಗ್ರಹವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.