ನವದೆಹಲಿ: ನೇರ ತೆರಿಗೆಯ ನಿವ್ವಳ ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದಲ್ಲಿ ನವೆಂಬರ್ 9ರವರೆಗೆ ₹10.60 ಲಕ್ಷ ಕೋಟಿಯಷ್ಟು ಆಗಿದೆ ಎಂದು ಆದಾಯ ತೆರಿಗೆ ಇಲಾಖೆಯು ಶುಕ್ರವಾರ ತಿಳಿಸಿದೆ.
ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ತೆರಿಗೆ ಸಂಗ್ರಹ ಶೇ 22ರಷ್ಟು ಹೆಚ್ಚಾಗಿದೆ. ಪ್ರಸಕ್ತ ಹಣಕಾಸು ವರ್ಷಕ್ಕೆ ನೇರ ತೆರಿಗೆ ಸಂಗ್ರಹದ ಕುರಿತು ಮಾಡಿರುವ ಬಜೆಟ್‌ನಲ್ಲಿ ಅಂದಾಜಿನ ಶೇ 58ರಷ್ಟನ್ನು ದಾಟಿದೆ. ಪ್ರಸಕ್ತ ಹಣಕಾಸು ವರ್ಷಕ್ಕೆ ನೇರ ತೆರಿಗೆಯ ಮೂಲಕ ₹16.61 ಲಕ್ಷ ಕೋಟಿ ವರಮಾನ ಸಂಗ್ರಹ ಆಗುವ ಅಂದಾಜನ್ನು ಬಜೆಟ್‌ನಲ್ಲಿ ಮಾಡಲಾಗಿದೆ. 2022–23ನೇ ಹಣಕಾಸು ವರ್ಷದಲ್ಲಿ ನೇರ ತೆರಿಗೆಯ ಮೂಲಕ ₹16.61 ಲಕ್ಷ ಕೋಟಿ ವರಮಾನ ಸಂಗ್ರಹ ಆಗಿತ್ತು.
ಕಾರ್ಪೊರೇಟ್ ತೆರಿಗೆಯ ನಿವ್ವಳ ಸಂಗ್ರಹ ಶೇ 12.48ರಷ್ಟು ಹೆಚ್ಚಾಗಿದೆ. ಆದಾಯ ತೆರಿಗೆ ಸಂಗ್ರಹವು ಶೇ 31.77ರಷ್ಟು ಏರಿಕೆ ಆಗಿದೆ. ನೇರ ತೆರಿಗೆಯ ಸರಾಸರಿ ಸಂಗ್ರಹವು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ 17.59ರಷ್ಟು ಹೆಚ್ಚಾಗಿ ₹12.37 ಲಕ್ಷ ಕೋಟಿಗೆ ತಲುಪಿದೆ ಎಂದು ಇಲಾಖೆಯು ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.