ನವದೆಹಲಿ: ಆರ್ಥಿಕ ಸುಧಾರಣೆ ಮತ್ತು ಬ್ಯಾಂಕಿಂಗ್ ಕ್ಷೇತ್ರವನ್ನು ಬಲಪಡಿಸುವ ಕ್ರಮವಾಗಿ ಕೆಲವು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ವಿಲೀನ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಭಾರತದ ಆರ್ಥಿಕತೆಯನ್ನು ಬಲಪಡಿಸಲು ಕೇಂದ್ರ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ಬ್ಯಾಂಕ್‌ಗಳನ್ನು ವಿಲೀನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನವಾಗಲಿದೆ. ಅದೇ ರೀತಿಕೆನರಾ ಬ್ಯಾಂಕ್‌ನಲ್ಲಿ ಸಿಂಡಿಕೇಟ್ ಬ್ಯಾಂಕ್,ಇಂಡಿಯನ್ ಬ್ಯಾಂಕ್‌ನಲ್ಲಿ ಅಲಹಾಬಾದ್ ಬ್ಯಾಂಕ್,ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಂಧ್ರಾ ಬ್ಯಾಂಕ್,ಕಾರ್ಪೊರೇಷನ್ ಬ್ಯಾಂಕ್ ವಿಲೀನವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಾಲ ವಸೂಲಾತಿಗೆ ಅಗತ್ಯ ಕ್ರಮಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.