ನವದೆಹಲಿ: ₹ 1,378 ಕೋಟಿ ಮೊತ್ತದ ಷೇರು ಮರುಖರೀದಿ ಪ್ರಸ್ತಾವನೆಗೆ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿ ಬುಧವಾರ ತಿಳಿಸಿದೆ.
ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.
ಷೇರುದಾರರಿಂದ ₹ 1ರ ಮುಖಬೆಲೆಯ 13.12 ಕೋಟಿ ಷೇರುಗಳನ್ನು ಪ್ರತಿ ಷೇರಿಗೆ ₹ 105ರಂತೆ ಖರೀದಿಸಲಾಗುವುದು ಎಂದು ಅದು ಹೇಳಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ ಶೇಕಡ 10ರಷ್ಟು ಹೆಚ್ಚಾಗಿದ್ದು, ₹ 772 ಕೋಟಿಗೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.