ADVERTISEMENT

ಕಬ್ಬಿಣದ ಅದಿರು ಉತ್ಪಾದನೆ ಹೆಚ್ಚಳ : ಎನ್‌ಎಂಡಿಸಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 23:05 IST
Last Updated 4 ಆಗಸ್ಟ್ 2020, 23:05 IST
ಸುಮಿತ್ ದೇಬ್
ಸುಮಿತ್ ದೇಬ್   

ಹೈದರಾಬಾದ್‌:ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್‌ಎಂಡಿಸಿ) ಜುಲೈನಲ್ಲಿ 21.9 ಲಕ್ಷ ಟನ್‌ ಕಬ್ಬಿಣದ ಅದಿರು ಉತ್ಪಾದಿಸಿದೆ.

ಕೋವಿಡ್‌–19 ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಹಿಂದಿನ ವರ್ಷದ ಜುಲೈಗೆ ಹೋಲಿಸಿದರೆ ಉತ್ಪಾದನೆಯಲ್ಲಿ ಶೇ 13ರಷ್ಟು ಏರಿಕೆ ಸಾಧ್ಯವಾಗಿದೆ. ಮಾರಾಟವು ಶೇ 7ರಷ್ಟು ಹೆಚ್ಚಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ಕೋವಿಡ್‌ನಿಂದಾಗಿ ಕಳೆದ ಕೆಲವು ತಿಂಗಳುಗಳು ಉದ್ಯಮವು ಹಲವು ಸವಾಲುಗಳನ್ನು ಎದುರಿಸಬೇಕಾಯಿತು. ಆದರೆ, ಇದನ್ನು ಒಂದು ಅವಕಾಶವನ್ನಾಗಿ ಬಳಸಿಕೊಂಡು ನಮ್ಮ ಉತ್ಪಾದನೆ ಸಾಮರ್ಥ್ಯವನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸಲಾಯಿತು’ ಎಂದು ಕಂಪನಿಯ ಅಧ್ಯಕ್ಷ ಸುಮಿತ್‌ ದೇಬ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.