ನವದೆಹಲಿ: ಡೆಸ್ಕ್‌ಟಾಪ್ ಕಂಪ್ಯೂಟರ್‌ಗಳ ಆಮದಿನ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯವು (ಡಿಜಿಎಫ್‌ಟಿ) ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಲಾಗಿದೆ.
ಲ್ಯಾಪ್‌ಟಾಪ್, ಪರ್ಸನಲ್ ಕಂಪ್ಯೂಟರ್, ಟ್ಯಾಬ್, ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್ ಮತ್ತು ಸರ್ವರ್‌ಗಳ ಆಮದಿಗೆ ಮಾತ್ರವಷ್ಟೇ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿಯೇ ಇವುಗಳ ಉತ್ಪಾದನೆಗೆ ಉತ್ತೇಜನ ನೀಡಲು ಸರ್ಕಾರವು ಈ ಕ್ರಮಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.