ನವದೆಹಲಿ: ‘ಎಟಿಎಂಗಳಿಗೆ ₹ 2 ಸಾವಿರದ ನೋಟುಗಳನ್ನು ಭರ್ತಿ ಮಾಡುವುದನ್ನು ಕಡಿಮೆ ಮಾಡುವಂತೆಬ್ಯಾಂಕ್‌ಗಳಿಗೆ ಯಾವುದೇ ಸೂಚನೆ ನೀಡಿಲ್ಲ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರತಿಳಿಸಿದ್ದಾರೆ.
ಬ್ಯಾಂಕ್‌ಗಳುಎಟಿಎಂಗಳಿಗೆ ₹2,000ನೋಟುಗಳ ಬದಲಿಗೆ ₹ 500 ಮುಖಬೆಲೆಯ ನೋಟುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿಮಾಡಲುಆರಂಭಿಸಿವೆ. ಕೆಲವು ಬ್ಯಾಂಕ್‌ಗಳು ಕಡಿಮೆ ಮುಖಬೆಲೆಯ ನೋಟುಗಳಿಗಾಗಿ ಎಟಿಎಂಗಳನ್ನು ಮರುಹೊಂದಾಣಿಕೆ ಮಾಡುತ್ತಿವೆ. ಈ ಕುರಿತು ಸಚಿವಾಲಯವು ಯಾವುದೇ ಸೂಚನೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.
ಹಣಕಾಸು ಸಚಿವಾಲಯದಿಂದ ಯಾವುದೇ ಸೂಚನೆ ಇರದಿದ್ದರೂ ಬ್ಯಾಂಕ್‌ಗಳು ಗ್ರಾಹಕರ ಅನುಕೂಲದ ದೃಷ್ಟಿಯಿಂದ ಎಟಿಎಂಗಳಿಗೆಕಡಿಮೆ ಮುಖಬೆಲೆಯ ನೋಟುಗಳನ್ನು ಭರ್ತಿ ಮಾಡುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕ್, ₹2,000 ಮುಖಬೆಲೆಯ ನೋಟುಗಳನ್ನು ಎಟಿಎಂಗಳಿಗೆ ತುಂಬುವುದನ್ನು ನಿಲ್ಲಿಸಲು ನಿರ್ಧರಿಸಿರುವುದಾಗಿ ಈಗಾಗಲೇ ಪ್ರಕಟಿಸಿದೆ.₹2000 ಮುಖಬೆಲೆ ನೋಟು ಮುದ್ರಿಸುವುದನ್ನು ನಿಲ್ಲಿಸಿರುವುದಾಗಿ ಕಳೆದ ವರ್ಷ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಆರ್‌ಟಿಐ ಪ್ರತಿಕ್ರಿಯೆಯಲ್ಲಿ ತಿಳಿಸಿತ್ತು.
₹2,000 ನೋಟುಗಳಿಗೆ ಚಿಲ್ಲರೆ ಪಡೆಯುವುದು ಸಮಸ್ಯೆಯಾಗಿ ಪರಿಣಮಿಸಿರುವುದರಿಂದ ಕೆಲವು ಬ್ಯಾಂಕ್‌ಗಳು ಎಟಿಎಂಗಳಲ್ಲಿ ಗರಿಷ್ಠ ಮುಖಬೆಲೆ ನೋಟುಗಳನ್ನು ಬಳಸುವುದನ್ನು ನಿಲ್ಲಿಸಿವೆ. ಆರ್‌ಬಿಐನ ಆರ್‌ಟಿಐ ಪ್ರತಿಕ್ರಿಯೆ ಪ್ರಕಾರ, 2016–17ರಲ್ಲಿ ₹2,000 ಮುಖಬೆಲೆಯ 354.299 ಕೋಟಿ ನೋಟುಗಳನ್ನು ಮುದ್ರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.