ನವದೆಹಲಿ: ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು (ಎನ್‌ಟಿಪಿಸಿ) 2023–24ರ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹6,490 ಕೋಟಿ ನಿವ್ವಳ ಲಾಭ ಗಳಿಸಿದೆ.
2022–23ರ ಇದೇ ಅವಧಿಯಲ್ಲಿ ₹4,871 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 33ರಷ್ಟು ಏರಿಕೆಯಾಗಿದೆ. ಒಟ್ಟು ವರಮಾನವು ₹44,744 ಕೋಟಿಯಿಂದ ₹48,816 ಕೋಟಿಗೆ ಹೆಚ್ಚಳವಾಗಿದೆ. ಹೆಚ್ಚಿದ ವರಮಾನದಿಂದ ಲಾಭದ ಪ್ರಮಾಣ ಏರಿಕೆಯಾಗಿದೆ ಎಂದು ನಿಗಮವು ಷೇರುಪೇಟೆಗೆ ತಿಳಿಸಿದೆ.
2023–24ರ ಪೂರ್ಣ ಹಣಕಾಸು ವರ್ಷದಲ್ಲಿ ₹21,332 ಕೋಟಿ ಲಾಭ ಗಳಿಸಿದೆ. ಹಿಂದಿನ ಇದೇ ಅವಧಿಯಲ್ಲಿ ₹17,121 ಕೋಟಿ ಲಾಭ ಗಳಿಸಿತ್ತು. ವರಮಾನವು ₹1.77 ಲಕ್ಷ ಕೋಟಿಯಿಂದ ₹1.81 ಲಕ್ಷ ಕೋಟಿಗೆ ಏರಿಕೆಯಾಗಿದೆ.
ಕಂಪನಿಯ ಮಂಡಳಿಯು ಪ್ರತಿ ಷೇರಿಗೆ ₹3.25 ಡಿವಿಡೆಂಡ್ ನೀಡಲು ಶಿಫಾರಸು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.