ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸೋಮವಾರ 17 ವರ್ಷಗಳ ಹಿಂದಿನ ಕನಿಷ್ಠ ಮಟ್ಟಕ್ಕೆ ಇಳಿದಿದೆ.
ತೈಲ ಬೆಲೆ ಅಗ್ಗವಾಗಿದ್ದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಇಳಿಕೆಯಾಗಿಲ್ಲ. ಕೇಂದ್ರ ಸರ್ಕಾರವು ಇಂಧನಗಳ ಮೇಲೆ ಎಕ್ಸೈಸ್ ಡ್ಯೂಟಿ ಹೆಚ್ಚಿಸಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಚ್ಚಾ ತೈಲ ದರ ಇಳಿಕೆಯ ಲಾಭವನ್ನು ನಿರಂತರವಾಗಿ ತಮ್ಮ ನಷ್ಟ ಭರ್ತಿ ಮಾಡಿಕೊಳ್ಳಲು ಬಳಸಿಕೊಳ್ಳುತ್ತಿವೆ. ಹೀಗಾಗಿ ಸತತ 14ನೇ ದಿನವೂ ಇಂಧನಗಳ ಬೆಲೆ ಒಂದೇ ಮಟ್ಟದಲ್ಲಿ ಇದೆ.
ಪ್ರತಿ ಲೀಟರ್‌ಗೆ ₹ 3ರಂತೆ ಎಕ್ಸೈಸ್ ಡ್ಯೂಟಿ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ₹ 39 ಸಾವಿರ ಕೋಟಿ ಹೆಚ್ಚುವರಿ ವರಮಾನ ಹರಿದು ಬರಲಿದೆ. ಮುಂಬರುವ ದಿನಗಳಲ್ಲಿ ಎಕ್ಸೈಸ್ ಡ್ಯೂಟಿಯನ್ನು ಪ್ರತಿ ಲೀಟರ್‌ಗೆ ₹ 8ರವರೆಗೆ ಹೆಚ್ಚಿಸುವ ಅವಕಾಶಕ್ಕೆ ಸರ್ಕಾರ ಸಂಸತ್ತಿನ ಅನುಮೋದನೆ ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.