ನವದೆಹಲಿ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (ಒಎನ್‌ಜಿಸಿ) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ಶೇ 34ರಷ್ಟು ಇಳಿಕೆ ಕಂಡಿದ್ದು, ₹10,015 ಕೋಟಿಗೆ ತಲುಪಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹15,206 ಕೋಟಿಯಷ್ಟು ನಿವ್ವಳ ಲಾಭ ಆಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಚ್ಚಾ ತೈಲ ಉತ್ಪಾದನೆ ಮತ್ತು ಮಾರಾಟದಿಂದ ಪ್ರತಿ ಬ್ಯಾರಲ್‌ಗೆ 76.49 ಡಾಲರ್ ಗಳಿಕೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರತಿ ಬ್ಯಾರಲ್ ಗಳಿಕೆಯು 108.55 ಡಾಲರ್ ಆಗಿತ್ತು ಎಂದು ಕಂಪನಿ ಮಾಹಿತಿ ನೀಡಿದೆ.
ಸರಾಸರಿ ವರಮಾನವು ಶೇ 20ರಷ್ಟು ಇಳಿಕೆ ಕಂಡು ₹33,814 ಕೋಟಿಗೆ ತಲುಪಿದೆ. ಕಚ್ಚಾ ತೈಲ ಉತ್ಪಾದನೆಯು ಶೇ 3.2ರಷ್ಟು ಮತ್ತು ಅನಿಲ ಉತ್ಪಾದನೆಯು ಶೇ 3.3ರಷ್ಟು ಇಳಿಕೆ ಕಂಡಿದೆ ಎಂದು ಕಂಪನಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.