ಲಂಡನ್: ಪೆಟ್ರೋಲಿಯಂ ರಫ್ತುದಾರ ರಾಷ್ಟ್ರಗಳ ಒಕ್ಕೂಟ (ಒಪೆಕ್) ಮತ್ತು ಆ ಒಕ್ಕೂಟದ ಮಿತ್ರರಾಷ್ಟ್ರಗಳ (ಒಪೆಕ್+) ಪ್ರತಿನಿಧಿಗಳು ದಿನಕ್ಕೆ 10 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ಕಚ್ಚಾ ತೈಲ ಉತ್ಪಾದನೆಯನ್ನು ತಗ್ಗಿಸುವ ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳು ಹೇಳಿವೆ.
ಒಂದೊಮ್ಮೆ ಈ ಪ್ರಮಾಣದಲ್ಲಿ ಉತ್ಪಾದನೆ ತಗ್ಗಿಸಿದರೆ, 2020ರ ಬಳಿಕದ ಅತ್ಯಂತ ಗರಿಷ್ಠ ಮಟ್ಟದ್ದಾಗಿರಲಿದೆ ಎಂದೂ ತಿಳಿಸಿವೆ. ಕಚ್ಚಾ ತೈಲ ದರ ಇಳಿಮುಖವಾಗಿರುವುದರಿಂದ ಬುಧವಾರ ತೈಲ ಉತ್ಪಾದನಾ ದೇಶಗಳು ಸಭೆ ನಡೆಸಲು ನಿರ್ಧರಿಸಿವೆ.
ಅಮೆರಿಕ ಸೇರಿದಂತೆ ಪ್ರಮುಖ ಬಳಕೆದಾರ ದೇಶಗಳು ಉತ್ಪಾದನೆ ಹೆಚ್ಚಿಸುವಂತೆ ಒತ್ತಡ ಹೇರುತ್ತಿವೆ. ಆದರೆ, ಒಪೆಕ್+ ಅದಕ್ಕೆ ಕಿವಿಗೊಡುತ್ತಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.