ನವದೆಹಲಿ: ‘2004ರ ಜನವರಿ 1ರ ನಂತರ ಕೇಂದ್ರ ಸರ್ಕಾರಿ ನೌಕರರಾಗಿ ನೇಮಕವಾದವರಿಗೆ ಮತ್ತೆ ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೊಳಿಸುವ ಯಾವುದೇ ಪ್ರಸ್ತಾವವು ತನ್ನ ಪರಿಶೀಲನೆಯಲ್ಲಿ ಇಲ್ಲ’ ಎಂದು ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಗೆ ಸ್ಪಷ್ಟಪಡಿಸಿದೆ.
ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, ಈ ಕುರಿತು ಮಾಹಿತಿ ನೀಡಿದ್ದಾರೆ.
ಕೇಂದ್ರ ಪಿಂಚಣಿ ಮತ್ತು ಪಿಂಚಣಿದಾರರ ಕ್ಷೇಮಾಭಿವೃದ್ಧಿ ಇಲಾಖೆಯ ಮಾಹಿತಿ ಅನ್ವಯ ಈ ವರ್ಷದ ಮಾರ್ಚ್ ಅಂತ್ಯಕ್ಕೆ ಒಟ್ಟು 67.95 ಲಕ್ಷ ಕೇಂದ್ರ ಸರ್ಕಾರಿ ಪಿಂಚಣಿದಾರರು ಇದ್ದಾರೆ ಎಂದು ವಿವರಿಸಿದ್ದಾರೆ.
ಈ ಪೈಕಿ ನಾಗರಿಕ ಸೇವೆ 11.42 ಲಕ್ಷ, ರಕ್ಷಣೆ 33.87 ಲಕ್ಷ, ದೂರಸಂಪರ್ಕ 4.38 ಲಕ್ಷ, ಅಂಚೆ 3.01 ಲಕ್ಷ ಹಾಗೂ ರೈಲ್ವೆ ಇಲಾಖೆಯಲ್ಲಿ 15.25 ಲಕ್ಷ ಪಿಂಚಣಿದಾರರು ಇದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.