ನವದೆಹಲಿ: 2023–24ನೇ ಆರ್ಥಿಕ ವರ್ಷದಲ್ಲಿ ಗಳಿಸಿದ ಆದಾಯಕ್ಕೆ ಸಂಬಂಧಿಸಿದಂತೆ ಬುಧವಾರ ಸಂಜೆ 7 ಗಂಟೆವರೆಗೆ 7 ಕೋಟಿಗೂ ಹೆಚ್ಚು ತೆರಿಗೆದಾರರು ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆಯು ತಿಳಿಸಿದೆ.
‘ಅಂದು ಸಂಜೆವರೆಗೆ 50 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ’ ಎಂದು ‘ಎಕ್ಸ್’ನಲ್ಲಿ ತಿಳಿಸಿದೆ.
2024–25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ತೆರಿಗೆದಾರರು ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿತ್ತು. ಇಲಾಖೆಯು ದಿನಾಂಕವನ್ನು ವಿಸ್ತರಣೆ ಮಾಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.