ADVERTISEMENT

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್‌ನಲ್ಲಿ ಪತಂಜಲಿ ಬೇಷರತ್ ಕ್ಷಮೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮಾರ್ಚ್ 2024, 5:38 IST
Last Updated 21 ಮಾರ್ಚ್ 2024, 5:38 IST
<div class="paragraphs"><p>ಬಾಬಾ ರಾಮ್‌ದೇವ್‌</p></div>

ಬಾಬಾ ರಾಮ್‌ದೇವ್‌

   

– ಪಿಟಿಐ

ಬೆಂಗಳೂರು: ದಾರಿ ತಪ್ಪಿಸುವ ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಕಂಪನಿ, ಬೇಷರತ್‌ ಕ್ಷಮೆ ಕೋರಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ADVERTISEMENT

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಭವಿಷ್ಯದಲ್ಲಿ ಈ ಜಾಹಿರಾತುಗಳನ್ನು ಪ್ರಕಟಿಸುವುದಿಲ್ಲ. ಕಂಪನಿಯ ಆಯುರ್ವೇದ ಉತ್ಪನ್ನಗಳನ್ನು ತೆಗೆದುಕೊಳ್ಳುವ ಮೂಲಕ ಆರೋಗ್ಯಕರ ಜೀವನ ಸಾಗಿಸುವುದರ ಬಗ್ಗೆ ಜನರಿಗೆ ಪ್ರೋತ್ಸಾಹಿಸುವುದಷ್ಟೇ ನಮ್ಮ ಉದ್ದೇಶವಾಗಿತ್ತು ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ನೀಡಿಲಾಗಿದ್ದ ನೋಟಿಸ್‌ಗೆ ಉತ್ತರಿಸದಿದ್ದರಿಂದ ಗರಂ ಆಗಿದ್ದ ಸುಪ್ರೀಂ ಕೋರ್ಟ್‌, ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿ ಮಾಡಿ, ಖುದ್ದು ಹಾಜರಿರಬೇಕು ಎಂದು ಬಾಬಾ ರಾಮ್‌ದೇವ್‌ ಹಾಗೂ ಬಾಲಕೃಷ್ಣ ಅವರಿಗೆ ಮಂಗಳವಾರ ಸೂಚಿಸಿತ್ತು.

ಇದರ ಬೆನ್ನಲ್ಲೇ ಬೇಷರತ್‌ ಕ್ಷಮೆ ಯಾಚಿಸಿ ಪತಂಜಲಿ ಸಂಸ್ಥೆಯು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.