ಬೆಂಗಳೂರು: ಸತತ ಆರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ₹120.51 ಮತ್ತು ಡೀಸೆಲ್‌ಗೆ ₹104.77 ದರವಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ₹111.09 ಮತ್ತು ಡೀಸೆಲ್‌ಗೆ ₹94.79 ರಷ್ಟಿದೆ.
ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ₹105.41 ಮತ್ತು ಡೀಸೆಲ್‌ಗೆ ₹96.67 ದರವಿದೆ.
ಸ್ಥಳೀಯ ಮಾರಾಟ ತೆರಿಗೆ ಮತ್ತು ಸಾಗಣೆ ವೆಚ್ಚಕ್ಕೆ ಅನುಗುಣವಾಗಿ ಮಾರಾಟ ದರವು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಆಗುತ್ತದೆ.
ಐದು ರಾಜ್ಯಗಳ ಚುನಾವಣೆ ಕೊನೆಗೊಂಡ ಬಳಿಕ ಮಾರ್ಚ್ 22 ರಂದು ನಡೆದ ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮ ಅಂತ್ಯಗೊಂಡ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸತತ 14 ನೇ ಬಾರಿ ಹೆಚ್ಚಳವಾಗಿತ್ತು.
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ 17 ದಿನಗಳಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದವು. ಮಾರ್ಚ್ 22ರಿಂದ ಏಪ್ರಿಲ್ 7ರವರೆಗೆ ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಲೀಟರಿಗೆ ₹10.43ರಷ್ಟು ಮತ್ತು ಡೀಸೆಲ್ ದರ ₹9.70ರಷ್ಟು ಹೆಚ್ಚಳ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.