ADVERTISEMENT

ಒಂಬತ್ತು ದಿನಗಳಲ್ಲಿ ಎಂಟು ಬಾರಿ ಪೆಟ್ರೋಲ್, ಡೀಸೆಲ್‌ ದರ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2022, 14:11 IST
Last Updated 30 ಮಾರ್ಚ್ 2022, 14:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 80 ಪೈಸೆಯಷ್ಟು ಹೆಚ್ಚಿಸಿವೆ. ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 101.01 ಮತ್ತು ಡೀಸೆಲ್‌ ದರ ಲೀಟರಿಗೆ ₹ 92.27ಕ್ಕೆ ಏರಿಕೆ ಆಗಿದೆ.

ಇದರಿಂದಾಗಿ, ಕಳೆದ ಒಂಬತ್ತು ದಿನಗಳಲ್ಲಿ ಎಂಟು ಬಾರಿ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರಿಗೆ ₹5.60ರಷ್ಟು ಹೆಚ್ಚಿಸಿದಂತಾಗಿದೆ.

ಮುಂಬೈನಲ್ಲಿ ಪೆಟ್ರೋಲ್‌ ಬೆಲೆಯು ಲೀಟರಿಗೆ ₹115.88 ಹಾಗೂ ಡೀಸೆಲ್‌ ಬೆಲೆಯು ₹100.10 ಕ್ಕೆ ಏರಿಕೆಯಾಗಿದೆ.

ADVERTISEMENT

ಸ್ಥಳೀಯಮಾರಾಟ ದರಕ್ಕೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ತೈಲ ದರದಲ್ಲಿ ವ್ಯತ್ಯಾಸ ಆಗುತ್ತದೆ. ಎಚ್‌ಪಿಸಿಎಲ್‌ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ₹ 106.44 ಮತ್ತು ₹ 90.47ಕ್ಕೆ ತಲುಪಿದೆ.

ಮಾರ್ಚ್‌ 22ರಿಂದ ದರ ಪರಿಷ್ಕರಣೆ ಆರಂಭ ಆಗಿದ್ದು, ಬುಧವಾರದವರೆಗೆ, ಬೆಂಗಳೂರಿನಲ್ಲಿ ಪೆಟ್ರೋಲ್‌ ದರವು ಲೀಟರಿಗೆ ₹ 5.86ರಷ್ಟು ಮತ್ತು ಡೀಸೆಲ್‌ ದರ ₹ 5.46 ರಷ್ಟು ಹೆಚ್ಚಳ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.