ADVERTISEMENT

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 10 ದಿನಗಳಲ್ಲಿ 9 ಬಾರಿ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮಾರ್ಚ್ 2022, 12:21 IST
Last Updated 31 ಮಾರ್ಚ್ 2022, 12:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಗುರುವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 80 ಪೈಸೆಯಷ್ಟು ಹೆಚ್ಚಿಸಿವೆ. ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 101.81ಕ್ಕೆ, ಡೀಸೆಲ್‌ ದರ ಲೀಟರಿಗೆ ₹ 93.07ಕ್ಕೆ ಏರಿಕೆ ಆಗಿದೆ.

ಸ್ಥಳೀಯ ಮಾರಾಟ ದರಕ್ಕೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ತೈಲ ದರದಲ್ಲಿ ವ್ಯತ್ಯಾಸ ಆಗುತ್ತದೆ. ಎಚ್‌ಪಿಸಿಎಲ್‌ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ₹ 107.34ಕ್ಕೆ ಮತ್ತು ಡೀಸೆಲ್ ದರ ₹ 91.31ಕ್ಕೆ ತಲುಪಿದೆ. ಮಾರ್ಚ್‌ 22ರಿಂದ ದರ ಪರಿಷ್ಕರಣೆ ಮತ್ತೆ ಆರಂಭ ಆಗಿದ್ದು, ಗುರುವಾರದವರೆಗೆ ಬೆಂಗಳೂರಿನಲ್ಲಿ ಪೆಟ್ರೋಲ್‌ ದರವು ಲೀಟರಿಗೆ ₹ 6.7ರಷ್ಟು ಮತ್ತು ಡೀಸೆಲ್‌ ದರ ₹ 6.3ರಷ್ಟು ಹೆಚ್ಚಳ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT