ADVERTISEMENT

ವರ್ಷದಲ್ಲಿ ಮೊದಲ ಬಾರಿಗೆ ಪೆಟ್ರೋಲ್‌ ದರ 18 ಪೈಸೆ, ಡೀಸೆಲ್‌ 17 ಪೈಸೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 5:46 IST
Last Updated 24 ಮಾರ್ಚ್ 2021, 5:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪೆಟ್ರೋಲ್‌ ದರ ಲೀಟರ್‌ಗೆ 18 ಪೈಸೆ ಮತ್ತು ಡೀಸೆಲ್‌ ದರ ಲೀಟರ್‌ಗೆ 17 ಪೈಸೆ ಕಡಿಮೆಯಾಗಿದೆ. ಒಂದು ವರ್ಷದಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್‌ ದರದಲ್ಲಿ ಇಳಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿದಿರುವುದರಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದರಬುಧವಾರ ಕಡಿಮೆಯಾಗಿದೆ.

‘ದೆಹಲಿಯಲ್ಲಿ ಈ ಮುಂಚೆ ಪೆಟ್ರೋಲ್‌ ದರ ಲೀಟರ್‌ಗೆ ₹91.17 ಇತ್ತು. ಆದರೆ, ಬುಧವಾರ ₹90.99ಕ್ಕೆ ಇಳಿದಿದೆ. ಡೀಸೆಲ್‌ ದರ ಈ ಹಿಂದೆ ಲೀಟರ್‌ಗೆ ₹81.47 ಇತ್ತು. ಈಗ ಲೀಟರ್‌ಗೆ ₹ 81.30 ಇದೆ.

ADVERTISEMENT

ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆಯಾಗಿದೆ. ಆದರೆ ಸ್ಥಳೀಯ ಮೌಲ್ಯವರ್ಧಿತ ತೆರಿಗೆಯ (ವ್ಯಾಟ್‌) ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಈ ದರವು ಬದಲಾಗುತ್ತದೆ.

ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಇಂಧನ ಬೆಲೆಯಲ್ಲಿ ಇಳಿಕೆಯಾಗಿದೆ. ಈ ಹಿಂದೆ ಮಾರ್ಚ್‌ 16, 2020ರಲ್ಲಿ ಇಂಧನ ದರವು ಇಳಿಕೆಯಾಗಿತ್ತು.

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಪೆಟ್ರೋಲ್‌ ಬೆಲೆ ₹100ರ ಗಡಿ ದಾಟಿತ್ತು.

ದರ ಪರಿಷ್ಕರಣೆ ನಂತರ ಮುಂಬೈನಲ್ಲಿ ಪೆಟ್ರೋಲ್‌ ದರವು ಲೀಟರ್‌ಗೆ ₹97.40 ಹಾಗೂ ಡೀಸೆಲ್‌ಗೆ ₹88.42 ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.