ADVERTISEMENT

ಹುಬ್ಬಳ್ಳಿ, ಬೆಳಗಾವಿಯಲ್ಲಿ ಹೊಸ ಟರ್ಮಿನಲ್‌: ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ

ವರ್ಚುವಲ್‌ ಆಗಿ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

ಪಿಟಿಐ
Published 10 ಮಾರ್ಚ್ 2024, 16:18 IST
Last Updated 10 ಮಾರ್ಚ್ 2024, 16:18 IST
ಹುಬ್ಬಳ್ಳಿ ವಿಮಾನ ನಿಲ್ದಾಣ
ಹುಬ್ಬಳ್ಳಿ ವಿಮಾನ ನಿಲ್ದಾಣ   

ನವದೆಹಲಿ: ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ ಹಾಗೂ ಆಂಧ್ರಪ್ರದೇಶದ ಕಡಪ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್‌ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಶಿಲಾನ್ಯಾಸ ನೆರವೇರಿಸಿದರು. 

ಅಲ್ಲದೆ ನವದೆಹಲಿ, ಪುಣೆ, ಕೊಲ್ಹಾಪುರ, ಗ್ವಾಲಿಯರ್‌, ಜಬಲ್‌ಪುರ, ಲಖನೌ, ಅಲಿಘಡ, ಅಜಂಗಢ, ಚಿತ್ರಕೂಟ, ಮೊರಾದಾಬಾದ್, ಶ್ರಾವಸ್ತಿ ಹಾಗೂ ಆದಂಪುರ ವಿಮಾನ ನಿಲ್ದಾಣಗಳಲ್ಲಿ ಹೊಸದಾಗಿ ನಿರ್ಮಿಸಿರುವ ಟರ್ಮಿನಲ್‌ಗಳನ್ನು ಲೋಕಾರ್ಪಣೆಗೊಳಿಸಿದರು. 

ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ವರ್ಚುಯಲ್‌ ಆಗಿ ಈ 15 ಏರ್‌ಪೋರ್ಟ್‌ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳ ಮೊತ್ತ ₹9,800 ಕೋಟಿ ಆಗಿದೆ.  

ADVERTISEMENT

ಹುಬ್ಬಳ್ಳಿಯಲ್ಲಿ ಟರ್ಮಿನಲ್‌ ನಿರ್ಮಾಣಕ್ಕೆ ₹350 ಕೋಟಿ ನಿಗದಿಪಡಿಸಲಾಗಿದೆ. ಬೆಳಗಾವಿಯಲ್ಲಿ 16,400 ಚದರ ಮೀಟರ್‌ ವಿಸ್ತೀರ್ಣದಲ್ಲಿ ಟರ್ಮಿನಲ್‌ ನಿರ್ಮಿಸಲಾಗುತ್ತಿದ್ದು, ₹357 ಕೋಟಿ ವೆಚ್ಚ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.