ನವದೆಹಲಿ: ‘ಕೃತಕ ಬುದ್ಧಿಮತ್ತೆ (ಎ.ಐ) ಸೇರಿ ಡಿಜಿಟಲ್ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಚೌಕಟ್ಟು ರೂಪಿಸುವ ಅಗತ್ಯವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಮಂಗಳವಾರ ನಡೆದ ಅಂತರರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ–ಡಬ್ಲ್ಯುಟಿಎಸ್‌ಎ ಮತ್ತು ಇಂಡಿಯನ್ ಮೊಬೈಲ್ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
‘ಡಿಜಿಟಲ್ ಸಾಧನಗಳನ್ನು ದೇಶದ ಕಾನೂನಿನ ಪರಿಮಿತಿ ಹಾಗೂ ಗಡಿ ದಾಟಿ ಬಳಸಲಾಗುತ್ತಿದೆ. ಪ್ರಸ್ತುತ ಜಗತ್ತಿನ ಯಾವುದೇ ದೇಶವು ಸೈಬರ್ ಬೆದರಿಕೆಗಳಿಂದ ತನ್ನ ಜನರನ್ನು ರಕ್ಷಿಸಿಕೊಳ್ಳುವ ಸ್ವಸಾಮರ್ಥ್ಯ ಹೊಂದಿಲ್ಲ. ಹಾಗಾಗಿ, ಎಲ್ಲಾ ದೇಶಗಳು ಒಟ್ಟಾಗಿ ಕೆಲಸ ನಿರ್ವಹಿಸಬೇಕಿದೆ. ಈ ನಿಟ್ಟಿನಲ್ಲಿ ಜಾಗತಿಕ ಸಂಸ್ಥೆಗಳು ಜವಾಬ್ದಾರಿ ತೆಗೆದುಕೊಳ್ಳಬೇಕಿದೆ’ ಎಂದರು.
ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಏನನ್ನು ಮಾಡಬೇಕು ಹಾಗೂ ಏನನ್ನು ಮಾಡಬಾರದು ಎಂಬ ಬಗ್ಗೆ ಸ್ಪಷ್ಟ ನಿಯಮಾವಳಿಗಳನ್ನು ರೂಪಿಸಬೇಕಿದ ಎಂದು ಹೇಳಿದರು.
Cut-off box - ಭಾರತವು ಜಗತ್ತಿನಲ್ಲಿ 5ಜಿ ತಂತ್ರಜ್ಞಾನದ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. 6ಜಿ ತಂತ್ರಜ್ಞಾನದ ವಿನ್ಯಾಸ ಅಭಿವೃದ್ಧಿಯಲ್ಲಿ ಮುಂಚೂಣಿ ಸ್ಥಾನಕ್ಕೇರಲು ಕಾರ್ಯತತ್ಪರವಾಗಿದೆ ನರೇಂದ್ರ ಮೋದಿ ಪ್ರಧಾನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.