ADVERTISEMENT

ಪಿಎಂಸಿ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಲಹೆ

ಪಂಜಾಬ್‌ ಮತ್ತು ಮಹಾರಾಷ್ಟ್ರ ಕೋ–ಆಪರೇಟಿವ್‌ ಬ್ಯಾಂಕ್‌ ಹಗರಣ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 19:28 IST
Last Updated 18 ಅಕ್ಟೋಬರ್ 2019, 19:28 IST

ನವದೆಹಲಿ: ಪಂಜಾಬ್‌ ಮತ್ತು ಮಹಾರಾಷ್ಟ್ರ ಕೋ–ಆಪರೇಟಿವ್‌ ಬ್ಯಾಂಕ್‌ನಿಂದ (ಪಿಎಂಸಿ) ಹಣ ವಾಪಸ್‌ಗೆ ವಿಧಿಸಿರುವ ನಿರ್ಬಂಧ ತೆಗೆದು ಹಾಕಲು ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

`32ನೇ ವಿಧಿ ಅನ್ವಯ ಈ ಅರ್ಜಿ ವಿಚಾರಣೆ ನಡೆಸಲು ನಮಗೆ ಅವಕಾಶ ಇಲ್ಲ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಪಡೆಯಬಹುದು‘ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ತಿಳಿಸಿದೆ. ಬೆಜೊನ್‌ ಕುಮಾರ್‌ ಮಿಶ್ರಾ ಎನ್ನುವವರು ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. 500 ಖಾತೆದಾರರ ಪರ ಈ ಅರ್ಜಿ ಸಲ್ಲಿಸಿದ್ದಾಗಿ ಮಿಶ್ರಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT