ADVERTISEMENT

ಬ್ರೈಲಿ ಲಿಪಿಯ ಡೆಬಿಟ್‌ ಕಾರ್ಡ್‌ ಬಿಡುಗಡೆ ಮಾಡಿದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌

ಪಿಟಿಐ
Published 12 ಆಗಸ್ಟ್ 2024, 12:33 IST
Last Updated 12 ಆಗಸ್ಟ್ 2024, 12:33 IST
   

ನವದೆಹಲಿ: ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ದೃಷ್ಟಿದೋಷ ಇರುವ ಗ್ರಾಹಕರ ಅನುಕೂಲಕ್ಕಾಗಿ ಬ್ರೈಲಿ ಲಿಪಿಯಲ್ಲಿರುವ ‘ಪಿಎನ್‌ಬಿ ಅಂತಃದೃಷ್ಟಿ’ ಡೆಬಿಟ್‌ ಕಾರ್ಡ್‌ ಬಿಡುಗಡೆ ಮಾಡಿದೆ.

ಈ ಸಂಪರ್ಕರಹಿತ ನ್ಯಾಷನಲ್‌ ಕಾಮನ್‌ ಮೊಬಿಲಿಟಿ ಕಾರ್ಡ್‌ನ (ಎನ್‌ಸಿಎಂಸಿ) ಡೆಬಿಟ್‌ ಕಾರ್ಡ್‌ ರುಪೇ ನೆಟ್‌ವರ್ಕ್‌ನಲ್ಲಿ ಲಭ್ಯವಿದೆ ಎಂದು ಬ್ಯಾಂಕ್‌ ತಿಳಿಸಿದೆ.

ದೃಷ್ಟಿಹೀನರಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಅನುಕೂಲ ಕಲ್ಪಿಸಲು ಈ ಕಾರ್ಡ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಇದರಿಂದ ಅವರು ಸುಲಭವಾಗಿ ಹಣಕಾಸು ನಿರ್ವಹಣೆ ಮಾಡಲು ಸಾಧ್ಯವಾಗಲಿದೆ ಎಂದು ಬ್ಯಾಂಕ್‌ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.