ADVERTISEMENT

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹3,252 ಕೋಟಿ ನಿವ್ವಳ ಲಾಭ

ಪಿಟಿಐ
Published 27 ಜುಲೈ 2024, 15:10 IST
Last Updated 27 ಜುಲೈ 2024, 15:10 IST
<div class="paragraphs"><p>ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌</p></div>

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌

   

ನವದೆಹಲಿ: 2024–25ನೇ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ), ₹3,252 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಎರಡು ಪಟ್ಟು ಏರಿಕೆಯಾಗಿದೆ.

2023–24ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹1,255 ಕೋಟಿ ಲಾಭಗಳಿಸಲಾಗಿತ್ತು. ವಸೂಲಾಗದ ಸಾಲದ ‍ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೊತೆಗೆ, ಬಡ್ಡಿ ವರಮಾನದಲ್ಲಿ ಏರಿಕೆಯಾಗಿದೆ. ಹಾಗಾಗಿ, ಈ ತ್ರೈಮಾಸಿಕದಲ್ಲಿ ಲಾಭ ಹೆಚ್ಚಳವಾಗಿದೆ ಎಂದು ಬ್ಯಾಂಕ್‌, ಶನಿವಾರ ತಿಳಿಸಿದೆ. 

ADVERTISEMENT

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ ₹28,579 ಕೋಟಿ ವರಮಾನ ಗಳಿಸಿತ್ತು. ಈ ತ್ರೈಮಾಸಿಕದಲ್ಲಿ ₹32,166 ಕೋಟಿ ಗಳಿಸಿದೆ.

ಕಳೆದ ವರ್ಷ ₹25,145 ಕೋಟಿ ಬಡ್ಡಿ ವರಮಾನಗಳಿಸಿತ್ತು. ಈ ಬಾರಿ ₹28,556 ಕೋಟಿ ಗಳಿಸಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 7.73ರಿಂದ ಶೇ 4.98ಕ್ಕೆ ಕುಗ್ಗಿದೆ. ನಿವ್ವಳ ಎನ್‌ಪಿಎ ಶೇ 1.98ರಿಂದ ಶೇ 0.60ಕ್ಕೆ ಇಳಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.