ನವದೆಹಲಿ: ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) 2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹2,223 ಕೋಟಿ ನಿವ್ವಳ ಲಾಭ ಗಳಿಸಿದೆ.
2022–23ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹629 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ತ್ರೈಮಾಸಿಕದಲ್ಲಿ ನಿವ್ವಳ ಲಾಭವು ಮೂರು ಪಟ್ಟು ಏರಿಕೆಯಾಗಿದೆ ಎಂದು ಬ್ಯಾಂಕ್ ಗುರುವಾರ ಷೇರುಪೇಟೆಗೆ ತಿಳಿಸಿದೆ.
ಒಟ್ಟು ವರಮಾನವು ₹25,722 ಕೋಟಿಯಿಂದ ₹29,962 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್‌ನ ಬಡ್ಡಿ ಆದಾಯದಲ್ಲೂ ಹೆಚ್ಚಳವಾಗಿದೆ. ₹22,384 ಕೋಟಿಯಿಂದ ₹27,289 ಕೋಟಿಗೆ ಏರಿಕೆ ಆಗಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 9.76ರಿಂದ ಶೇ 6.24ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 3.30ಯಿಂದ ಶೇ 0.96ಕ್ಕೆ ಕುಗ್ಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.