ನವದೆಹಲಿ: ಸರ್ಕಾರಿ ಸ್ವಾಮ್ಯದ ಪವರ್ ಗ್ರಿಡ್ ಕಾರ್ಪೊರೇಷನ್ 2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹4,028 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹3,645 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ತ್ರೈಮಾಸಿಕದಲ್ಲಿ ಲಾಭವು ಶೇ 10.5ರಷ್ಟು ಏರಿಕೆ ಆಗಿದೆ. ಒಟ್ಟು ವರಮಾನವು ₹11,530 ಕೋಟಿಯಿಂದ ₹11,819 ಕೋಟಿಗೆ ಹೆಚ್ಚಳವಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.
ಪ್ರತಿ ಈಕ್ವಿಟಿ ಷೇರಿಗೆ ₹4.50 ಎರಡನೇ ಮಧ್ಯಂತರದ ಲಾಭಾಂಶ ನೀಡಲು ಬುಧವಾರ ನಡೆದ ಕಂಪನಿಯ ನಿರ್ದೇಶಕರ ಮಂಡಳಿ ಸಭೆಯು ಅನುಮೋದನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.