ADVERTISEMENT

ಉಜ್ವಲ ಯೋಜನೆ: 5 ಕೋಟಿ ಸಂಪರ್ಕ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2018, 15:44 IST
Last Updated 3 ಆಗಸ್ಟ್ 2018, 15:44 IST
ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್‌ ಅವರು ಫಲಾನುಭವಿಗೆ ಎಲ್‌ಪಿಜಿ ಸಂಪರ್ಕವನ್ನು ಸಾಂಕೇತಿಕವಾಗಿ ವಿತರಿಸಿದರು. ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ (ಎಡತುದಿ) ಉಪಸ್ಥಿತರಿದ್ದರು
ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್‌ ಅವರು ಫಲಾನುಭವಿಗೆ ಎಲ್‌ಪಿಜಿ ಸಂಪರ್ಕವನ್ನು ಸಾಂಕೇತಿಕವಾಗಿ ವಿತರಿಸಿದರು. ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ (ಎಡತುದಿ) ಉಪಸ್ಥಿತರಿದ್ದರು   

ನವದೆಹಲಿ: ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಬಡ ಕುಟುಂಬಗಳಿಗೆ ವಿತರಿಸುವ ಅಡುಗೆ ಅನಿಲ ಸಿಲಿಂಡರುಗಳ (ಎಲ್‌ಪಿಜಿ) ಸಂಖ್ಯೆಯು 5 ಕೋಟಿಗೆ ತಲುಪಿದೆ.

ಶುಕ್ರವಾರ ಇಲ್ಲಿ ನಡೆದ ಸಮಾರಂಭದಲ್ಲಿ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್‌ ಅವರು, ಈ ಯೋಜನೆಯ 5 ಕೋಟಿಯ ಫಲಾನುಭವಿಯಾಗಿರುವದೆಹಲಿ ನಿವಾಸಿ ತಕ್ರದಿರನ್‌ ಅವರಿಗೆ ಎಲ್‌ಪಿಜಿ ಸಂಪರ್ಕ ವಿತರಿಸಿದರು.

ಈ ಗುರಿ ಸಾಧಿಸಲು ಶ್ರಮಿಸಿದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳಾದ ಐಒಸಿ, ಬಿಪಿಸಿಎಲ್‌ ಮತ್ತು ಎಚ್‌ಪಿಸಿಎಲ್‌ ಸಿಬ್ಬಂದಿಯ ಕಾರ್ಯವೈಖರಿಯನ್ನು ಮಹಾಜನ್‌ ಅವರು ಶ್ಲಾಘಿಸಿದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು 2016ರ ಮೇ 1ರಂದು ಈ ಯೋಜನೆಗೆ ಚಾಲನೆ ನೀಡಿದ್ದರು. 2019ರ ಮಾರ್ಚ್‌ ಅಂತ್ಯದ ವೇಳೆಗೆ ಠೇವಣಿ ಇಲ್ಲದೇ ಉಚಿತವಾಗಿ 5 ಕೋಟಿಗಳಷ್ಟು ಎಲ್‌ಪಿಜಿ ಸಂಪರ್ಕ ಕಲ್ಪಿಸುವ ಗುರಿ ನಿಗದಿಪಡಿಸಲಾಗಿತ್ತು. ಅವಧಿಗೆ ಮುಂಚೆಯೇ ಈ ಗುರಿ ಸಾಧಿಸಲಾಗಿದೆ. ಫಲಾನುಭವಿಗಳಲ್ಲಿ ಶೇ 47ರಷ್ಟು ಜನರು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ್ದಾರೆ.

ಯೋಜನೆಯ ಯಶಸ್ಸಿನಿಂದಾಗಿ ಈಗ ಗುರಿಯನ್ನು 8 ಕೋಟಿಗೆ ಹೆಚ್ಚಿಸಲಾಗಿದೆ. ಇದಕ್ಕಾಗಿ ₹ 12,800 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಬಡ ಕುಟುಂಬಗಳಿಗೆ ಶುದ್ಧ ಅಡುಗೆ ಇಂಧನ ಪೂರೈಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.