ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು (ಆರ್‌ಬಿಐ ಬ್ಯಾಂಕ್‌ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರ) ಬುಧವಾರ ಶೇ 5.40 ರಷ್ಟು ಇಳಿಕೆ ಮಾಡಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸತತ ನಾಲ್ಕನೇ ಬಾರಿಗೆ ಆರ್‌ಬಿಐ ರೆಪೊ ದರವನ್ನು ಇಳಿಸಿದೆ.
ಜೂನ್ ಮೊದಲ ವಾರದಲ್ಲಿ ರೆಪೊ ದರ ಶೇ.5.75 ಆಗಿತ್ತು. ಆರ್‌ಬಿಐ ಗವರ್ನರ್ ಶಕ್ತಿಕಾಂತದಾಸ್ ಅಧ್ಯಕ್ಷರಾಗಿರುವ ಆರು ಸದಸ್ಯರ ಹಣಕಾಸು ನೀತಿಸಮಿತಿ ರೆಪೊ ದರ ಇಳಿಕೆ ಮಾಡುವ ಈ ತೀರ್ಮಾನ ಕೈಗೊಂಡಿತ್ತು.
ಒಂಭತ್ತು ವರ್ಷಗಳ ಕಾಲಾವಧಿಯಲ್ಲಿ ಅತೀ ಕಡಿಮೆ ರೆಪೊ ದರ ಇದಾಗಿದೆ.
ಸಮಿತಿಯಲ್ಲಿರುವ ನಾಲ್ವರು ಸದಸ್ಯರು ರೆಪೊ ದರವನ್ನು 0.35% ಇಳಿಕೆ ಮಾಡುವುದರ ಬಗ್ಗೆ ಅಭಿಪ್ರಾಯ ವ್ಯಕ್ತ ಪಡಿಸಿದ್ದು,ಇಬ್ಬರು ಸದಸ್ಯರು 0.25% ಇಳಿಕೆ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದರು.
ರೆಪೊ ದರ ಇಳಿಕೆಯಾಗಿದ್ದರಿಂದ ಇಎಂಐ ಮತ್ತು ಸಾಲದ ಮೇಲಿನ ಬಡ್ಡಿದರ ಇಳಿಕೆಯಾಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.