ನವದೆಹಲಿ: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್‌ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್‌ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್‌ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್‌ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
'ಮಾಸ್ಟರ್‌ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್‌ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್‌ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.