ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಲ್ಪಾವಧಿ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಆರ್‌ಬಿಐ ಬ್ಯಾಂಕ್‌ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರವಾದ ‘ರೆಪೊ’ ಶೇ 6.5ರಷ್ಟಿದ್ದು, ಅದನ್ನು ಯಥಾಸ್ಥಿತಿಯಲ್ಲಿಯೇ ಕಾಯ್ದುಕೊಂಡಿದೆ.
ಮಧ್ಯಮಾವಧಿಗೆ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವನ್ನು ಶೇ 4ರಲ್ಲಿ ನಿಯಂತ್ರಿಸಬೇಕಿದೆ. ಹೀಗಾಗಿ ಹಣಕಾಸು ನೀತಿಯನ್ನು ಬಿಗಿಗೊಳಿಸುವ ಉದ್ದೇಶದಿಂದ ಹಣಕಾಸು ನೀತಿ ಸಮಿತಿಯು ಯಥಾಸ್ಥಿತಿಯ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಆರ್‌ಬಿಐ ತಿಳಿಸಿದೆ.
2018–19ನೇ ಹಣಕಾಸು ವರ್ಷಕ್ಕೆದೇಶದ ಒಟ್ಟು ಆಂತರಿಕ ಉತ್ಪಾದನೆ (ಜಿಡಿಪಿ) ನಿರೀಕ್ಷೆಯನ್ನು ಶೇ 7.4 ರಷ್ಟಿರಲಿದೆ ಎಂದು ಹೇಳಿದೆ. 2019–20ನೇ ಹಣಕಾಸು ವರ್ಷಕ್ಕೆ ಜಿಡಿಪಿ ಶೇ 7.5ರಷ್ಟಿರುವ ಅಂದಾಜು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.