ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಹಣಕಾಸು ನೀತಿ ಸಮಿತಿಯು (ಎಂಪಿಸಿ) ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಇರುವ ತೀರ್ಮಾನವನ್ನು ಶುಕ್ರವಾರ ನಡೆದ ಸಭೆಯಲ್ಲಿ ಕೈಗೊಂಡಿದೆ.
ರೆಪೊ ದರವನ್ನು ಶೇಕಡ 6.5ರಲ್ಲಿ ಕಾಯ್ದುಕೊಳ್ಳುವ ತೀರ್ಮಾನವನ್ನು ಎಂಪಿಸಿ ಸದಸ್ಯರು ಸರ್ವಾನುಮತದಿಂದ ಕೈಗೊಂಡಿದ್ದಾರೆ.
ಆ ಮೂಲಕ ಆರ್‌ಬಿಐ ಸತತ 5ನೇ ಬಾರಿಯೂ ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ನಿರ್ಧರಿಸಿದೆ.
ಎಂಪಿಸಿ ಸದಸ್ಯರು ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.