ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ಸಭೆಯು (ಎಂಪಿಸಿ) ಬುಧವಾರ ಆರಂಭಗೊಂಡಿದೆ.
ಚಿಲ್ಲರೆ ಹಣದುಬ್ಬರ ನಿಯಂತ್ರಣ ಹಾಗೂ ಆರ್ಥಿಕತೆಯ ವೇಗ ಕಾಯ್ದುಕೊಳ್ಳುವ ಸವಾಲು ಆರ್‌ಬಿಐನ ಮುಂದಿದೆ. ಹಾಗಾಗಿ, ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರೀಕ್ಷೆಯಿದೆ. ಶುಕ್ರವಾರದಂದು ಗವರ್ನರ್ ಶಕ್ತಿಕಾಂತ ದಾಸ್ ಅವರು, ಬಡ್ಡಿದರಕ್ಕೆ ಸಂಬಂಧಿಸಿದಂತೆ ಸಭೆಯ ನಿರ್ಣಯವನ್ನು ಪ್ರಕಟಿಸಲಿದ್ದಾರೆ.
2024–25ನೇ ಹಣಕಾಸು ವರ್ಷದಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಪ್ರಸ್ತುತ ರೆಪೊ ದರವು ಶೇ 6.5ರಷ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.