ನವದೆಹಲಿ (ಪಿಟಿಐ): ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದಕ್ಕೆ ಭಾರತ ಸಹಿ ಹಾಕದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲು ನವೆಂಬರ್ 4ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು (ಎಐಕೆಎಸ್‌ಸಿಸಿ) ನಿರ್ಧರಿಸಿದೆ.
ಉದ್ದೇಶಿತ ವ್ಯಾಪಾರ ಒಪ್ಪಂದದಲ್ಲಿ ಕೃಷಿ ಕ್ಷೇತ್ರವನ್ನು ಸೇರ್ಪಡೆ ಮಾಡದಿರಲು ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಒಪ್ಪಂದದ ಕುರಿತು ಅಂತಿಮ ತೀರ್ಮಾನಕ್ಕೆ ಬರುವ ಮುಂಚೆ, ಉದ್ದೇಶಿತ ಒಪ್ಪಂದದ ಪೂರ್ಣ ಪಾಠವನ್ನು ಬಹಿರಂಗಪಡಿಸಬೇಕು. ಈ ಸಂಬಂಧ ಕೃಷಿಕರು, ರೈತ ಸಂಘಟನೆಗಳು, ರಾಜ್ಯ ಸರ್ಕಾರಗಳು ಮತ್ತು ಇತರ ಭಾಗಿದಾರರ ಜತೆ ಚರ್ಚೆ ನಡೆಸಬೇಕು ಎಂದು ದೇಶದಲ್ಲಿನ 250 ಕೃಷಿ ಸಂಘಟನೆಗಳ ಒಕ್ಕೂಟವಾಗಿರುವ ‘ಎಐಕೆಎಸ್‌ಸಿಸಿ’ಯ ಸಂಚಾಲಕ ವಿ. ಎಂ. ಸಿಂಗ್ ಹೇಳಿದ್ದಾರೆ.
ಸಚಿವರ ಸಭೆ: 16 ದೇಶಗಳ ವಾಣಿಜ್ಯ ಸಚಿವರು ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಭೆ ಸೇರಿ ಉದ್ದೇಶಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಆರ್‌ಸಿಇಪಿ) ಸಂಬಂಧಿಸಿದ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.