ADVERTISEMENT

ಹಣದುಬ್ಬರ ನಿಯಂತ್ರಣ ಕಷ್ಟಸಾಧ್ಯ: ಶಕ್ತಿಕಾಂತ ದಾಸ್‌

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2024, 15:52 IST
Last Updated 15 ಫೆಬ್ರುವರಿ 2024, 15:52 IST
ಶಕ್ತಿಕಾಂತ ದಾಸ್‌
ಶಕ್ತಿಕಾಂತ ದಾಸ್‌   

ಮುಂಬೈ (ಪಿಟಿಐ): ‘ಆಹಾರ ಪದಾರ್ಥಗಳ ಬೆಲೆ ಏರಿಕೆ ಹಾಗೂ ಜಾಗತಿಕ ಮಟ್ಟದಲ್ಲಿ ಸೃಷ್ಟಿಯಾಗುತ್ತಿರುವ ಹೊಸ ಬಿಕ್ಕಟ್ಟುಗಳಿಂದಾಗಿ ಹಣದುಬ್ಬರವನ್ನು ನಿಯಂತ್ರಿಸುವುದು ಕಷ್ಟಸಾಧ್ಯವಾಗಿದೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ಗುರುವಾರ ನಡೆದ 59ನೇ ಸೌತ್ ಈಸ್ಟ್ ಏಷ್ಯನ್ ಸೆಂಟ್ರಲ್ ಬ್ಯಾಂಕ್ಸ್ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬೆಲೆ ಇಳಿಕೆಯ ಮೇಲೆ ಆರ್‌ಬಿಐ ನಿಗಾ ಇಟ್ಟಿದೆ. ಹಣದುಬ್ಬರ ಇಳಿಕೆಯಾದರಷ್ಟೇ ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧ್ಯ’ ಎಂದರು.

‘2024–25ನೇ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಬೆಳವಣಿಗೆಯು ಶೇ 7.0ರಷ್ಟು ಪ್ರಗತಿ ಕಾಣಲಿದೆ ಎಂದು ಆರ್‌ಬಿಐ ಅಂದಾಜಿಸಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.