ನವದೆಹಲಿ: ಫೆಬ್ರುವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 6.58ಕ್ಕೆ ಇಳಿದಿದೆ.
ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರಜನವರಿಯಲ್ಲಿ ಶೇ 7.59ರಷ್ಟು ಗರಿಷ್ಠ ಮಟ್ಟದಲ್ಲಿತ್ತು.
ತರಕಾರಿ ಮತ್ತು ಆಹಾರ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಆಗಿರುವುದರಿಂದ ಚಿಲ್ಲರೆ ಹಣದುಬ್ಬರದಲ್ಲಿ 6 ತಿಂಗಳಲ್ಲಿ ಮೊದಲ ಬಾರಿಗೆ ಅಲ್ಪ ಇಳಿಕೆ ಕಂಡುಬಂದಿದೆ.
2019ರ ಆಗಸ್ಟ್‌ನಿಂದಲೂ ಚಿಲ್ಲರೆ ಹಣದುಬ್ಬರ ಏರುಮುಖವಾಗಿತ್ತು.
ಐಐಪಿ ಏರಿಕೆ:ಜನವರಿ ತಿಂಗಳ ಕೈಗಾರಿಕಾ ಉತ್ಪಾದನೆ ಶೇ 2ಕ್ಕೆ ಅಲ್ಪ ಏರಿಕೆ ಕಂಡಿದೆ.
ಕೈಗಾರಿಕಾ ಉತ್ಪಾದನಾ ಸೂಚ್ಯಂಕದ (ಐಐಪಿ) ಆಧಾರದ ಮೇಲೆ ಲೆಕ್ಕ ಹಾಕುವ ಕೈಗಾರಿಕಾ ಬೆಳವಣಿಗೆಯು 2019ರ ಜನವರಿಯಲ್ಲಿ ಶೇ 1.6ರಷ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.