ADVERTISEMENT

ದೇಶದಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆ: ಆರ್‌ಬಿಐ ಕಳವಳ

ಪಿಟಿಐ
Published 19 ಜೂನ್ 2024, 15:24 IST
Last Updated 19 ಜೂನ್ 2024, 15:24 IST
..........
..........   

ಮುಂಬೈ : ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಕ್ರಮೇಣವಾಗಿ ಇಳಿಕೆಯ ಪಥದಲ್ಲಿ ಸಾಗುತ್ತಿದೆ. ಆದರೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯು ಹಣದುಬ್ಬರದ ಇಳಿಕೆಗೆ ಅಡ್ಡಿಯಾಗುತ್ತಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.

ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಾಗತಿಕ ಬೆಳವಣಿಗೆಯು ಚೇತರಿಕೆ ಕಂಡಿದೆ. ವಿಶ್ವದ ಪ್ರಮುಖ ದೇಶಗಳಲ್ಲಿ ಚಿಲ್ಲರೆ ಹಣದುಬ್ಬರವು ಇಳಿಕೆಯ ಹಾದಿಗೆ ಮರಳಿದೆ. ಹಾಗಾಗಿ, ಆ ರಾಷ್ಟ್ರಗಳು ಹಣಕಾಸು ನೀತಿಗಳಲ್ಲಿ ಕೊಂಚ ಸಡಿಲಿಕೆಯತ್ತ ಮುಖ ಮಾಡಿವೆ ಎಂದು ಹೇಳಿದೆ. 

2024–25ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯು ಹಿಂದಿನ ತ್ರೈಮಾಸಿಕದಲ್ಲಿ ದಾಖಲಿಸಿದ್ದಕ್ಕಿಂತ ಹೆಚ್ಚು ಪ್ರಗತಿ ಕಾಣಲಿದೆ. ನೈರುತ್ಯ ಮಾನ್ಸೂನ್‌ ಮಾರುತಗಳ ಉತ್ತಮ ಆರಂಭದಿಂದಾಗಿ ಕೃಷಿ ಚಟುವಟಿಕೆಗಳಿಗೂ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಿದೆ.

ADVERTISEMENT

ಚಿಲ್ಲರೆ ಹಣದುಬ್ಬರವನ್ನು ಶೇ 4ರ ಮಿತಿಯಲ್ಲಿ ಕಾಯ್ದುಕೊಳ್ಳುವುದು ಆರ್‌ಬಿಐನ ಗುರಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.