ADVERTISEMENT

₹2 ಸಾವಿರ ಮುಖಬೆಲೆಯ ಶೇ 97.96ರಷ್ಟು ನೋಟು ವಾಪಸ್‌

ಪಿಟಿಐ
Published 2 ಸೆಪ್ಟೆಂಬರ್ 2024, 13:57 IST
Last Updated 2 ಸೆಪ್ಟೆಂಬರ್ 2024, 13:57 IST
New Indian Currency - 3D Rendered Image
New Indian Currency - 3D Rendered Image   

ಮುಂಬೈ: ₹2 ಸಾವಿರ ಮುಖಬೆಲೆಯ ಶೇ 97.96ರಷ್ಟು ನೋಟುಗಳು ಬ್ಯಾಂಕಿಂಗ್‌ ವ್ಯವಸ್ಥೆಗೆ ಮರಳಿವೆ. ಜನರ ಬಳಿ  ₹7,261 ಕೋಟಿ ಮೌಲ್ಯದ ನೋಟುಗಳಷ್ಟೇ ಇವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೋಮವಾರ ತಿಳಿಸಿದೆ.

₹2 ಸಾವಿರ ಮುಖಬೆಲೆಯ ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ 2023ರ ಮೇ 19ರಂದು ಆರ್‌ಬಿಐ ಘೋಷಿಸಿತ್ತು. 

ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.