ಮುಂಬೈ: ₹2 ಸಾವಿರ ಮುಖಬೆಲೆಯ ನೋಟುಗಳನ್ನು ಭಾನುವಾರದಿಂದ ಆರ್‌ಬಿಐನ ಪ್ರಾದೇಶಿಕ ಕಚೇರಿಗಳಲ್ಲಿ ಮಾತ್ರವೇ ಬದಲಿಸಿಕೊಳ್ಳಬಹುದು. ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಮತ್ತು ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವ ಅವಕಾಶವು ಶನಿವಾರಕ್ಕೆ ಮುಕ್ತಾಯ ಆಗಿದೆ.
₹2 ಸಾವಿರ ಮುಖಬೆಲೆಯ ₹3.43 ಲಕ್ಷ ಕೋಟಿ ಮೌಲ್ಯದ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದ್ದು, ಇನ್ನೂ ₹12 ಸಾವಿರ ಕೋಟಿ ಮೌಲ್ಯದ ನೋಟುಗಳು ಚಲಾವಣೆಯಲ್ಲಿ ಇವೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ಧಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.