ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರ ಭಾರತದ ರೂಪಾಯಿ ಮೌಲ್ಯವು 15 ಪೈಸೆಗಳಷ್ಟು ಕುಸಿದಿದ್ದು, ₹82.32ರಂತೆ ವಹಿವಾಟಗೊಂಡಿತು. ಈ ಮೂಲಕ ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟ ಕಂಡಿತು.
ಹಲವಾರು ತಿಂಗಳಿಂದ ರೂಪಾಯಿ ಮೌಲ್ಯದಲ್ಲಿ ಭಾರಿ ಕುಸಿತ ಉಂಟಾಗುತ್ತಿದೆ.
ಗುರುವಾರದ ಅಂತ್ಯಕ್ಕೆ ₹81.88ರಂತೆ ವಹಿವಾಟುಗೊಂಡಿದ್ದ ರೂಪಾಯಿ, ಶುಕ್ರವಾರದ ಆರಂಭಿಕ ಮಾರುಕಟ್ಟೆಯಲ್ಲಿ ₹82.20ನಂತೆ ವಹಿವಾಟುಗೊಂಡಿತ್ತು.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಕರೆನ್ಸಿಯ ಬಲ, ಅಮೆರಿಕ ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಿಸಿರುವುದು, ದೇಶೀಯ ಷೇರುಗಳಲ್ಲಿನ ನಕಾರಾತ್ಮಕ ಪ್ರವೃತ್ತಿ ಹಿನ್ನೆಲೆಯಲ್ಲಿ ದೇಶೀಯ ಕರೆನ್ಸಿಯ ಮೌಲ್ಯ ಕುಸಿತಕ್ಕೆ ಕಾರಣವಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.