ADVERTISEMENT

ಡಾಲರ್‌ ಎದುರು ₹81.50ಕ್ಕೆ ಕುಸಿದ ರೂಪಾಯಿ: ಸಾರ್ವಕಾಲಿಕ ಕನಿಷ್ಠ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಸೆಪ್ಟೆಂಬರ್ 2022, 6:52 IST
Last Updated 26 ಸೆಪ್ಟೆಂಬರ್ 2022, 6:52 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಸೋಮವಾರದ ಆರಂಭಿಕ ವಹಿವಾಟಿನಲ್ಲೇ ಭಾರತದ ರೂಪಾಯಿ ಮೌಲ್ಯವು 38 ಪೈಸೆ ಕುಸಿದಿದ್ದು, ಅಮೆರಿಕ ಡಾಲರ್ ಎದುರು 81.50ಕ್ಕೆ ಇಳಿಯುವ ಮೂಲಕ ಸಾರ್ವಕಾಲಿಕ ಕುಸಿತ ದಾಖಲಿಸಿದೆ.

ಹಲವಾರು ತಿಂಗಳಿಂದ ರೂಪಾಯಿ ಮೌಲ್ಯದಲ್ಲಿ ಭಾರಿ ಕುಸಿತ ಉಂಟಾಗುತ್ತಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಕರೆನ್ಸಿಯ ಬಲ,ಅಮೆರಿಕ ಫೆಡರಲ್ ರಿಸರ್ವ್‌ ಬಡ್ಡಿದರ ಹೆಚ್ಚಿಸಿರುವುದು, ದೇಶೀಯ ಷೇರುಗಳಲ್ಲಿನ ನಕಾರಾತ್ಮಕ ಪ್ರವೃತ್ತಿ ಮತ್ತು ಉಕ್ರೇನ್‌ನಲ್ಲಿನ ರಾಜಕೀಯ ಪರಿಸ್ಥಿತಿಯು ದೇಶೀಯ ಕರೆನ್ಸಿಯ ಮೌಲ್ಯ ಕುಸಿತಕ್ಕೆ ಕಾರಣವಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ADVERTISEMENT

ಇವುಗಳನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.