ಚೆನ್ನೈ: ಶ್ರೀಪೆರಂಬದೂರು ಘಟಕದಲ್ಲಿ ಪ್ರತಿಭಟನನಿರತ ಉದ್ಯೋಗಿಗಳ ಸಮಸ್ಯೆ ಬಗೆಹರಿಸುವ ಸಂಬಂಧ ಸ್ಯಾಮ್ಸಂಗ್ ಕಂಪನಿಯ ಹಿರಿಯ ಅಧಿಕಾರಿಗಳು ಮತ್ತು ತಮಿಳುನಾಡಿನ ಕೈಗಾರಿಕಾ ಸಚಿವ ಟಿ.ಆರ್.ಬಿ. ರಾಜಾ ಭಾನುವಾರ ಚರ್ಚೆ ನಡೆಸಿದರು.
ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 9ರಿಂದ 1,100ಕ್ಕೂ ಸ್ಯಾಮ್ಸಂಗ್ ಘಟಕದಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳು ಹೋರಾಟ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಉದ್ಯೋಗಿಗಳ ಸಮಸ್ಯೆ ಬಗೆಹರಿಸಲು ಮೂವರು ಸಚಿವರಿಗೆ ಜವಾಬ್ದಾರಿ ನೀಡಿದ್ದಾರೆ.
‘ಮುಖ್ಯಮಂತ್ರಿ ಅವರ ಸಲಹೆ ಮೇರೆಗೆ ಸ್ಯಾಮ್ಸಂಗ್ ಆಡಳಿತ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿದ್ದೇನೆ. ತ್ವರಿತವಾಗಿ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚಿಸಲಾಗಿದೆ’ ಎಂದು ಸಚಿವ ರಾಜಾ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
‘ಆಡಳಿತ ಮಂಡಳಿ ಮತ್ತು ಉದ್ಯೋಗಿಗಳು ಒಗ್ಗೂಡಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳುವ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.