ನವದೆಹಲಿ: ಯಾವುದೇ ಮನವಿ ಚೀಟಿ ಇಲ್ಲದೇ ಗ್ರಾಹಕರು ಏಕಕಾಲಕ್ಕೆ ₹20,000ಗಳ ವರೆಗೆ ₹2,000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾನುವಾರ ಸ್ಪಷ್ಟಪಡಿಸಿದೆ.
ವಿನಿಮಯದ ಸಮಯದಲ್ಲಿ ಗ್ರಾಹಕರು ಯಾವುದೇ ಗುರುತಿನ ಚೀಟಿಯನ್ನು ಒದಗಿಸುವ ಅಗತ್ಯವೂ ಇಲ್ಲ ಎಂದು ಎಸ್‌ಬಿಐ ತಿಳಿಸಿದೆ.
ಗ್ರಾಹಕರು ₹2,000 ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಅಥವಾ ಠೇವಣಿ ಇರಿಸುವ ವೇಳೆ ಅರ್ಜಿ, ಮನವಿ ಸಲ್ಲಿಸಬೇಕೆ ಎಂಬ ಅನುಮಾನಗಳು ಜನರಲ್ಲಿ ಮೂಡಿವೆ. ಈ ಹಿನ್ನೆಲೆಯಲ್ಲಿ ಅನುಮಾನಗಳನ್ನು ಪರಿಹರಿಸಲು ಎಸ್‌ಬಿಐ ಈ ಸ್ಪಷ್ಟನೆ ನೀಡಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ₹2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತ್ತು. ಆದರೆ, ₹2,000 ಮುಖಬೆಲೆಯ ನೋಟುಗಳು ಕಾನೂನುಬದ್ಧ ಮಾನ್ಯತೆ ಹೊಂದಿರುವುದಾಗಿಯೂ ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.