ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಆಧಾರಿತ ಸಾಲದ (ಎಂಸಿಎಲ್‌ಆರ್) ಮೇಲಿನ ಬಡ್ಡಿದರವನ್ನು ಶೇ 0.05ರಷ್ಟು ಹೆಚ್ಚಿಸಿದೆ.
ಶುಕ್ರವಾರದಿಂದಲೇ ಈ ಹೊಸ ಆದೇಶ ಜಾರಿಗೆ ಬರಲಿದೆ ಎಂದು ಬ್ಯಾಂಕ್ ತಿಳಿಸಿದೆ.
ಒಂದು ವರ್ಷದ ಎಂಸಿಎಲ್‌ಆರ್ ಬಡ್ಡಿದರವನ್ನು ಶೇ 9ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ದೀರ್ಘಕಾಲದ ಗೃಹ ಸಾಲದ ಮೇಲಿನ ಇಎಂಐ ಏರಿಕೆಯಾಗಲಿದೆ.
ಎಸ್‌ಬಿಐ ನೀಡಿರುವ ಸಾಲದ ಪೈಕಿ ಶೇ 42ರಷ್ಟು ಸಾಲಗಳು ಎಂಸಿಎಲ್‌ಆರ್ ಬಡ್ಡಿದರದೊಟ್ಟಿಗೆ ಸಂಯೋಜನೆಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.